Psalms 144:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
Kannada BSI Bible 2016
ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೌವನಸ್ಥರಾದ ನಮ್ಮ ಗಂಡುಮಕ್ಕಳು ಹೊರವಾಗಿ ಬೆಳೆದಿರುವ ಸಸಿಗಳಂತಿರುವರು; ಹೆಣ್ಣುಮಕ್ಕಳು ಅರಮನೆಯಲ್ಲಿರುವ ವಿಚಿತ್ರವಾಗಿ ಕೆತ್ತಿದ ಮೂಲೆಗಂಬದಂತಿರುವರು.
Kannada Bible (KNCL) BSI 2016
ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.