Psalms 144:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು, ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು, ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
Kannada BSI Bible 2016
ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರೀತಿಯೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ಆಶ್ರಯವೂ ನನ್ನ ಜನವನ್ನು ನನಗೆ ಅಧೀನಮಾಡಿದವನೂ ಆತನೇ.
Kannada Bible (KNCL) BSI 2016
ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.