Psalms 144:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಮನುಷ್ಯರು ಎಷ್ಟು ಮಾತ್ರದವರು? ನೀನು ಅವರನ್ನು ಯಾಕೆ ನೆನಸಬೇಕು? ಮನುಷ್ಯರು ಎಷ್ಟರವರು? ನೀನು ಅವರನ್ನು ಯಾಕೆ ಗಮನಿಸಬೇಕು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಏಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
Kannada BSI Bible 2016
ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
Kannada Bible (KNCL) BSI 2016
ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು I ನರಮಾನವನು ಏತರವನು, ನೀನವನನು ಪರಾಮರಿಸಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?