Psalms 146:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
Kannada BSI Bible 2016
ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.
Kannada Bible (KNCL) BSI 2016
ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.