Psalms 147:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
Kannada BSI Bible 2016
ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!
Kannada Bible (KNCL) BSI 2016
ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.