Psalms 148:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
Kannada BSI Bible 2016
ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು; ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಮೆರೆಯುತ್ತದೆ.
Kannada Bible (KNCL) BSI 2016
ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.