Psalms 149:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.
Kannada BSI Bible 2016
ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವದು. ಯಾಹುವಿಗೆ ಸ್ತೋತ್ರ!
Kannada Bible (KNCL) BSI 2016
ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.