Psalms 15:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
Kannada BSI Bible 2016
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
Kannada Bible (KNCL) BSI 2016
ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.