Psalms 16:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
Kannada BSI Bible 2016
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.
Kannada Bible (KNCL) BSI 2016
ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.