Psalms 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
Kannada BSI Bible 2016
ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ.
Kannada Bible (KNCL) BSI 2016
ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.