Psalms 16:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
Kannada BSI Bible 2016
ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಆಲೋಚನೆಯನ್ನು ಹೇಳಿ ಕೊಡುತ್ತಾನೆ; ಆತನನ್ನು ಕೊಂಡಾಡುವೆನು. ರಾತ್ರಿ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
Kannada Bible (KNCL) BSI 2016
ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು; ರಾತ್ರಿಯಲ್ಲಿಯೂ ನನ್ನ ಹೃದಯವು ನನಗೆ ಬೋಧಿಸುತ್ತದೆ.