Psalms 17:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
Kannada BSI Bible 2016
ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.
Kannada Bible (KNCL) BSI 2016
ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.