Psalms 17:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
Kannada BSI Bible 2016
ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.
Kannada Bible (KNCL) BSI 2016
ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.