Psalms 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
Kannada BSI Bible 2016
ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.
Kannada Bible (KNCL) BSI 2016
ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.