Psalms 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
Kannada BSI Bible 2016
ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ತೋರಿಬಂದವು.
Kannada Bible (KNCL) BSI 2016
ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.