Psalms 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, ಮಹಾಜಲರಾಶಿಗಳೊಳಗಿಂದ ಎಳೆದನು.
Kannada BSI Bible 2016
ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.
Kannada Bible (KNCL) BSI 2016
ಮೇಲಣಲೋಕದಿಂದ ಹಿಡಿದುಕೊಂಡನು ಕೈಚಾಚಿ I ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.