Psalms 18:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Kannada BSI Bible 2016
ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Kannada Bible (KNCL) BSI 2016
ಯುದ್ಧವಿದ್ಯೆಯ ಕಲಿತೆ ಆತನಿಂದಲೆ I ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.