Psalms 18:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
Kannada BSI Bible 2016
ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
Kannada Bible (KNCL) BSI 2016
ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.