Psalms 18:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
Kannada BSI Bible 2016
ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
Kannada Bible (KNCL) BSI 2016
ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.