Psalms 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
Kannada BSI Bible 2016
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.
Kannada Bible (KNCL) BSI 2016
ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.