Psalms 19:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀವೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
Kannada BSI Bible 2016
ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
Kannada Bible (KNCL) BSI 2016
ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.