Psalms 19:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
Kannada BSI Bible 2016
ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟು ಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವದಕ್ಕೆ ಉಲ್ಲಾಸಗೊಂಡಿದ್ದಾನೆ.
Kannada Bible (KNCL) BSI 2016
ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ I ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ I ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.