Psalms 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
Kannada BSI Bible 2016
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ನಿಯಮಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
Kannada Bible (KNCL) BSI 2016
ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.