Psalms 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
Kannada BSI Bible 2016
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?
Kannada Bible (KNCL) BSI 2016
ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?