Psalms 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು. (Verses 5-6)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
Kannada BSI Bible 2016
ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ
Kannada Bible (KNCL) BSI 2016
ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,