Psalms 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
Kannada BSI Bible 2016
ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು; ತನ್ನ ಭುಜಬಲದಿಂದ ಅವನಿಗೆ ವಿಜಯವನ್ನುಂಟು ಮಾಡುವನು.
Kannada Bible (KNCL) BSI 2016
ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.