Psalms 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
Kannada BSI Bible 2016
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.
Kannada Bible (KNCL) BSI 2016
ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.