Psalms 21:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
Kannada BSI Bible 2016
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.
Kannada Bible (KNCL) BSI 2016
ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.