Psalms 22:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
Kannada BSI Bible 2016
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯಮಾಡದೆಯೂ ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
Kannada Bible (KNCL) BSI 2016
ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?