Psalms 22:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
Kannada BSI Bible 2016
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
Kannada Bible (KNCL) BSI 2016
ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.