Psalms 22:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
Kannada BSI Bible 2016
ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
Kannada Bible (KNCL) BSI 2016
ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.