Psalms 22:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಅನ್ನುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
Kannada BSI Bible 2016
ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ ಎಂದು ಹೇಳುತ್ತಾರೆ.
Kannada Bible (KNCL) BSI 2016
“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ, ಯೆಹೋವ ದೇವರೇ ಆತನನ್ನು ಕಾಪಾಡಲಿ. ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ, ಅವರೇ ಆತನನ್ನು ಬಿಡಿಸಲಿ.”