Psalms 22:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
Kannada BSI Bible 2016
ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
Kannada Bible (KNCL) BSI 2016
ಮಾತೆಯುದರದಿಂದ ಎನ್ನನು ಹೊರಬರಿಸಿದವನು ನೀನು I ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಲಿ ಇರಿಸಿದವನು ನೀನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು; ನನ್ನ ತಾಯಿಯ ಎದೆಯಲ್ಲಿ ಇದ್ದಾಗಲೇ ನಾನು ನಿಮ್ಮಲ್ಲಿ ಭರವಸೆಯಿಡುವಂತೆ ಮಾಡಿದಿರಿ.