Psalms 23:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
Kannada BSI Bible 2016
ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹಸುರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
Kannada Bible (KNCL) BSI 2016
ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.