Psalms 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
Kannada BSI Bible 2016
ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
Kannada Bible (KNCL) BSI 2016
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.