Psalms 23:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
Kannada BSI Bible 2016
ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
Kannada Bible (KNCL) BSI 2016
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.