Psalms 25:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
Kannada BSI Bible 2016
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
Kannada Bible (KNCL) BSI 2016
ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.