Psalms 25:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
Kannada BSI Bible 2016
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
Kannada Bible (KNCL) BSI 2016
ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.