Psalms 25:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
Kannada BSI Bible 2016
ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.
Kannada Bible (KNCL) BSI 2016
ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.