Psalms 26:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು. ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
Kannada BSI Bible 2016
ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
Kannada Bible (KNCL) BSI 2016
ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.