Psalms 27:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
Kannada BSI Bible 2016
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
Kannada Bible (KNCL) BSI 2016
ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.