Psalms 27:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
Kannada BSI Bible 2016
ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.
Kannada Bible (KNCL) BSI 2016
ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ: I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.