Psalms 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
Kannada BSI Bible 2016
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.
Kannada Bible (KNCL) BSI 2016
ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.