Psalms 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
Kannada BSI Bible 2016
ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
Kannada Bible (KNCL) BSI 2016
ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.