Psalms 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
Kannada BSI Bible 2016
ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.
Kannada Bible (KNCL) BSI 2016
ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.