Psalms 28:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
Kannada BSI Bible 2016
ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
Kannada Bible (KNCL) BSI 2016
ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.