Psalms 28:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
Kannada BSI Bible 2016
ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.
Kannada Bible (KNCL) BSI 2016
ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.