Psalms 28:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
Kannada BSI Bible 2016
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
Kannada Bible (KNCL) BSI 2016
ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.