Psalms 29:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
Kannada BSI Bible 2016
ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.
Kannada Bible (KNCL) BSI 2016
ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.