Psalms 29:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
Kannada BSI Bible 2016
ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಗರ್ಜನೆಗೆ ದೇವದಾರುವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾ ದೇವದಾರುಗಳನ್ನೂ ಮುರಿದುಬಿಡುತ್ತಾನೆ.
Kannada Bible (KNCL) BSI 2016
ಆತನ ಗರ್ಜನೆಗೆ ಮುರಿದುಬೀಳುವುವು ದೇವದಾರು ಮರಗಳು I ಹೌದ್ಹೌದು, ಸೀಳಿ ಹೋಳಾಗುವುವು ಲೆಬನೋನಿನ ಮಹಾ ವೃಕ್ಷಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.